ಮನೆ ರಾಜ್ಯ ವಿಶ್ವ ಪರಿಸರ ದಿನ: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಸಿಎಂ ಬೊಮ್ಮಾಯಿ ಕರೆ

ವಿಶ್ವ ಪರಿಸರ ದಿನ: ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಸಿಎಂ ಬೊಮ್ಮಾಯಿ ಕರೆ

0

ಬೆಂಗಳೂರು (Bengaluru)- ವಿಶ್ವ ಪರಿಸರ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕಲು ಕರೆ ನೀಡಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಶುಭಾಶಯಗಳನ್ನು ಕೋರಿದ್ದಾರೆ.

ಬೊಮ್ಮಾಯಿ ಅವರು ಟ್ವೀಟ್‌ ಮಾಡಿ, ಇರುವುದೊಂದೇ ಭೂಮಿ, ಪರಿಸರವೇ ನಮ್ಮೆಲ್ಲರ ಆಸ್ತಿ, ಪ್ರಕೃತಿಯೊಂದಿಗೆ ಸಾಮರಸ್ಯದಿಂದ ಬದುಕೋಣ. ಮುಂದಿನ ಪೀಳಿಗೆಗಾಗಿ ಪರಿಸರವನ್ನು ಸಂರಕ್ಷಿಸುವ ಕಾರ್ಯಕ್ಕೆ ಮುಂದಾಗೋಣ. ವಿಶ್ವ ಪರಿಸರ ದಿನದ ಶುಭಾಶಯಗಳು ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ, ನಾವು ಪರಿಸರವನ್ನು ಉಳಿಸಿದರೆ ಪರಿಸರ ನಮ್ಮನ್ನು ಉಳಿಸುತ್ತದೆ ಎಂಬ ಸತ್ಯವನ್ನು ಮನವರಿಕೆ ಮಾಡಿದ್ದಾರೆ. ನಾವು ಪರಿಸರವನ್ನು ಉಳಿಸಿದರೆ ಪರಿಸರ ‌ನಮ್ಮನ್ನು ಉಳಿಸುತ್ತದೆ ಎಂಬ ಸರಳ ಸತ್ಯವನ್ನು ವರ್ತಮಾನದಲ್ಲಿ ಅರ್ಥಮಾಡಿಕೊಂಡರೆ ಇಂದಿನ‌ ಮತ್ತು ಮುಂದಿನ‌ ತಲೆಮಾರಿಗೆ ಭವಿಷ್ಯ ಸುರಕ್ಷಿತವಾಗಿ ಉಳಿಯಲಿದೆ. ಭೂತಾಯಿಯ ಮಕ್ಕಳೆಲ್ಲರಿಗೂ ವಿಶ್ವ ಪರಿಸರ ದಿನದ ಶುಭ ಹಾರೈಕೆಗಳು ಎಂದು ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ತಮ್ಮ ಸಂದೇಶದಲ್ಲಿ, ಪರಿಸರವಿಲ್ಲದೆ ನಾವಿಲ್ಲ, ಪರಿಸರದಿಂದಲೇ ನಾವೆಲ್ಲ ಎಂಬುದನ್ನು ಮರೆಯದಿರೋಣ. ಅನುಕ್ಷಣವು ಪರಿಸರವನ್ನು ರಕ್ಷಿಸಲು ಕಂಕಣಬದ್ಧರಾಗೋಣ ಎಂದು ಮನವಿ ಮಾಡಿದ್ದಾರೆ.

ಹಿಂದಿನ ಲೇಖನಗೌರಿ ಲಂಕೇಶ್ ಹತ್ಯೆ ಪ್ರಕರಣ: ನ್ಯಾಯಾಲಯಕ್ಕೆ ಸಾಕ್ಷ್ಯಗಳ ಪಟ್ಟಿ ಸಲ್ಲಿಕೆ
ಮುಂದಿನ ಲೇಖನ10 ವರ್ಷಕ್ಕಿಂತ ಹೆಚ್ಚು ಸೇವೆ ಸಲ್ಲಿಸಿದ ಸಿಬ್ಬಂದಿಯನ್ನು ಖಾಯಂಗೊಳಿಸಲು ಹೈಕೋರ್ಟ್‌ ಸೂಚನೆ