ಬೆಂಗಳೂರು: ಕೆಲಸ ನಿರ್ವಹಿಸುತ್ತಿದ್ದ ವೇಳೆ ಯಾದಗಿರಿ ಪಿಎಸ್ಐ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. ಆದರೆ, ಅವರ ಸಾವಿಗೆ ಯಾದಗಿರಿ ಶಾಸಕ ಮತ್ತು ಅವರ ಪುತ್ರನೇ ಕಾರಣ ಎಂದು ಕುಟುಂಬದವರು ಆರೋಪಿಸುತ್ತಿದ್ದಾರೆ.
ಈ ಹಿನ್ನಲೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಕೇಸ್ನ್ನು ಸಿಐಡಿ ತನಿಖೆಗೆ ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಇನ್ನು ಸೈಬರ್ ಠಾಣೆ ಪಿಎಸ್ಐ ಪರಶುರಾಮ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪಿಎಸ್ಐ ಪರಶುರಾಮ ಪತ್ನಿ ಶ್ವೇತಾ ಅವರು ನೀಡಿದ ದೂರನ್ನು ಆಧರಿಸಿ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಪುತ್ರ ಪಂಪನಗೌಡ ವಿರುದ್ಧ ಜಾತಿ ನಿಂದನೆ ಆರೋಪದಡಿ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಚ್ಚೆತ್ತ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿದೆ.