ಕರ್ನಾಟಕ ವಿಧಾನಸಭೆಯ ಚುನಾವಣೆಯ ಫಲಿತಾಂಶ ಇದೀಗ ಪ್ರಕಟಗೊಂಡಿದ್ದು, ಯಲ್ಲಾಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹಾಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಇನ್ನು ಕಳೆದ ಸಲ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದು, ಬಳಿಕ ಬೆಜೆಪಿ ಸೇರುವ ಮೂಲಕ ಸರ್ಕಾರವನ್ನ ಬಿಳಿಸಿದ್ದರು, ಬಳಿಕ ಉಪ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಬರೊಬ್ಬರಿ 80,442 ಮತಗಳನ್ನ ಪಡೆದು ಜಯಶಾಲಿಯಾಗಿದ್ದರು. ಈ ಬಾರಿ ಕೂಡ ಅಬ್ಬರದ ಪ್ರಚಾರದಲ್ಲಿ ತೊಡಗಿದ್ದು,ಭರ್ಜರಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್’ನಿಂದ ವಿಎಸ್ ಪಾಟೀಲ್ ಸ್ಪರ್ಧಿಸಿದ್ದು ಕೆಲವೇ ಅಂತರದಿಂದ ಸೋಲನುಭವಿಸಿದ್ದಾರೆ. ಇವರು ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಇವರು ಬಿಜೆಪಿ ಪರವಾಗಿ ಕಣದಲಿದ್ದು, ಇದೇ ಹೆಬ್ಬಾರ್ ವಿರುದ್ದ ಸೋತಿದ್ದರು. ಬಳಿಕ ಬಿಜೆಪಿ ಟಿಕೆಟ್ ಕೈ ತಪ್ಪಿದ್ದರಿಂದ ಕಾಂಗ್ರೆಸ್ನಿಂದ ಕಣಕ್ಕಿಳಿದಿದ್ದರು. ಶಿವರಾಮ್ ಹೆಬ್ಬಾರ್ ಭರ್ಜರಿ ಗೆಲುವು ಕಂಡಿದ್ದಾರೆ.