ಮನೆ ರಾಜ್ಯ ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

ಕನ್ನಡ ರಾಜ್ಯೋತ್ಸವದಂದು ಯಶಸ್ವಿನಿ ಯೋಜನೆ ಮರು ಜಾರಿ: ಸಿಎಂ ಬಸವರಾಜ ಬೊಮ್ಮಾಯಿ

0

ಬೆಂಗಳೂರು(Bengaluru): ಯಶಸ್ವಿನಿ ಯೋಜನೆಯನ್ನು ಕನ್ನಡ ರಾಜ್ಯೋತ್ಸವದಂದು ನವೆಂಬರ್‌ 1 ರಂದು ಪುನರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಗರದ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಿ ಗುರುವಾರ 50 ಹಾಸಿಗೆಗಳ ಜಯದೇವ ಆಸ್ಪತ್ರೆ ಉಪಕೇಂದ್ರ ಮತ್ತು ಇಂದಿರಾಗಾಂಧಿ ಮಕ್ಕಳ ಆಸ್ಪತೆಯ ಮಕ್ಕಳ ಐಸಿಯು ಉಪಕೇಂದ್ರದವನ್ನು ಉದ್ಘಾಟಿಸಿ ಮಾತನಾಡಿ ಅವರು, ‘ರಾಜ್ಯ ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಕಾಳಜಿ ವಹಿಸಿದೆ. 

ಈ ಹಿಂದೆ ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ ಕುಟುಂಬಗಳಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುವಲ್ಲಿ ಯಶಸ್ವಿನಿ ಯೋಜನೆ ಅನುಕೂಲಕರವಾಗಿತ್ತು. ರೈತರ ಹಿತದೃಷ್ಟಿಯಿಂದ ಯಶಸ್ವಿ ಯೋಜನೆಗೆ ನ.1ಕ್ಕೆ ಮರು ಚಾಲನೆ ನೀಡಲಾಗುತ್ತದೆ ಎಂದರು. ಸ

ಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿಮೆಡಿಸಿನ್‌ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುತ್ತದೆ. ಇದಕ್ಕಾಗಿ ಪ್ರಾದೇಶಿಕ ಮಟ್ಟದಲ್ಲಿ ಆರು ಕಮಾಂಡ್‌ ಸೆಂಟರ್‌ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ ರಾಜ್ಯದ ಎಲ್ಲಾ ಸಮುದಾಯ ಆರೋಗ್ಯ ಕೇಂದ್ರಗಳನ್ನು ಜೋಡಿಸುವ ವ್ಯವಸ್ಥೆಯನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದರು.