ಮನೆ ರಾಜ್ಯ ನೂಪುರ್ ಶರ್ಮಾ ಪ್ರಕರಣ ಸುಪ್ರೀಂ ಕೋರ್ಟ್ ಗೆ ಅಭಿನಂದನೆ ಸಲ್ಲಿಸಿದ‌ ಯಶವಂತ್ ಸಿನ್ಹಾ

ನೂಪುರ್ ಶರ್ಮಾ ಪ್ರಕರಣ ಸುಪ್ರೀಂ ಕೋರ್ಟ್ ಗೆ ಅಭಿನಂದನೆ ಸಲ್ಲಿಸಿದ‌ ಯಶವಂತ್ ಸಿನ್ಹಾ

0

ಬೆಂಗಳೂರು (Bengaluru):  ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ರಾಷ್ಟ್ರಪತಿ ಚುನಾವಣೆಯಲ್ಲಿ ಪ್ರತಿಪಕ್ಷಗಳ ಅಭ್ಯರ್ಥಿಯಾಗಿರುವ ಯಶವಂತ್ ಸಿನ್ಹಾ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿನ್ಹಾ ಅವರು, ಎರಡು ದಿನಗಳ ಹಿಂದೆ ಸುಪ್ರೀಂ ಕೋರ್ಟ್ ಬಿಜೆಪಿಯ ಮಾಜಿ ವಕ್ತಾರೆಗೆ ಛೀಮಾರಿ ಹಾಕಿದೆ. ನ್ಯಾಯಾಂಗ ಸಂವಿಧಾನಕ್ಕೆ ಉತ್ತರ ಕೊಡುತ್ತದೆ. ರಾಜಕೀಯ ಪಕ್ಷಗಳಿಗೆ ಅಲ್ಲ ಅಂತ ಹೇಳಿರುವುದು ಸ್ವಾಗತಾರ್ಹ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪ್ರಕಟಣೆಗಳು ಬರುತ್ತಿರುವುದು ದೇಶದ ದೌರ್ಭಾಗ್ಯ. ರಾಮಮಂದಿರ ತೀರ್ಪು ಮಂದಾಗ ಇಡೀ ದೇಶವೇ ಮೌನವಾಗಿ ಸ್ವಾಗತಿಸಿದೆ. ಈಗ ಅವರ ವಿರುದ್ಧ ತೀರ್ಪು ಬಂದಾಗ ನ್ಯಾಯಾಂಗ ನಿಂದಿಸುವ ಕೆಲಸ ಮಾಡಲಾಗುತ್ತಿದೆ ಎಂದು ಹೇಳಿದರು.
ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ಬೆಳವಣಿಗೆ, ಮಧ್ಯಪ್ರದೇಶ, ಕರ್ನಾಟಕ, ರಾಜ್ಯಗಳಲ್ಲಿ ಆಗಿರುವ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ ಎಂದ ಅವರು, ನಾನು ಆಯ್ಕೆಯಾದರೆ ಸಂವಿಧಾನಕ್ಕೆ ಉತ್ತರದಾಯಿತ್ವ ಆಗಲಿದ್ದೇನೆ. ಸಂವಿಧಾನಕ್ಕೆ ಮಾತ್ರ ಉತ್ತರದಾಯಿತ್ವ ಆಗಲಿದ್ದೇನೆ. ಆಡಳಿತ ಪಕ್ಷದ ಅಭ್ಯರ್ಥಿಯೂ ಹಾಗೆಯೇ ಇರಬೇಕು ಎಂದು ಬಯಸುತ್ತಿದ್ದೇನೆ. ರಾಷ್ಟ್ರಪತಿ ರಬ್ಬರ್ ಸ್ಟಾಂಪ್ ಆಗಬಾರದು. ಆಡಳಿತ ಪಕ್ಷದ ಅಭ್ಯರ್ಥಿ ಇದನ್ನು ಗಮನಿಸಲಿ‌‌ ಎಂದರು.
ರಾಜ್ಯಗಳಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ತಡೆಯುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವ ಅಗತ್ಯವಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ಪರಿಪಾಲಿಸಲಿ ಎಂದು ತಿಳಿಸಿದರು.
ದೇಶದಲ್ಲಿ ಕೋಮು ಧೃವೀಕರಣ ಆಗುತ್ತಿರುವುದನ್ನು ತಡೆಯುವ ಕೆಲಸವಾಗಬೇಕಿದೆ. ಆಡಳಿತ ಪಕ್ಷದ ಅಭ್ಯರ್ಥಿ ಅದನ್ನು ತಡೆಯುವ ಬಗ್ಗೆ ತಮ್ಮ ನಿಲುವು ಪ್ರಕಟಿಸಲಿ ಎಂದು ಹೇಳಿದರು.