ಚಾಮರಾಜನಗರ: ಲೋಕಸಭೆ ಚುನಾವಣೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಿಂದ ಯತೀಂದ್ರ ಸಿದ್ದರಾಮಯ್ಯ ಕಣಕ್ಕಿಳಿಯುವುದಿಲ್ಲ ಎಂದು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ತಿಳಿಸಿದರು.
ಚಾಮರಾಜನಗರದಲ್ಲಿ ಇಂದು ಮಾತನಾಡಿದ ಸಚಿವ ಕೆ.ವೆಂಕಟೇಶ್, ನನಗೆ ತಿಳಿದಿರುವ ಮಾಹಿತಿ ಪ್ರಕಾರ ಯತೀಂದ್ರ ಸಿದ್ದರಾಮಯ್ಯ ಮೈಸೂರಿಂದ ಕಣಕ್ಕೆ ಇಳಿಯುವುದಿಲ್ಲ. ನಾನಂತೂ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಇದು ನನ್ನ ಕೊನೆ ಚುನಾವಣೆ ನನಗೂ ಕೂಡ ವಯಸ್ಸಾಗಿದೆ ಎಂದು ಹೇಳಿದರು.
ಇನ್ನು ಸಿಎಂ ಸಿದ್ದರಾಮಯ್ಯ ವಿರುದ್ದ ಏಕವಚನ ಪದ ಬಳಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಕೆ.ವೆಂಕಟೇಶ್, ಸಂಸದ ಅನಂತ್ ಕುಮಾರ್ ಹೆಗಡೆಗೆ ಸಂಸ್ಕಾರನೇ ಇಲ್ಲ.ಆ ಮನುಷ್ಯನಿಗೆ ಸಂಸ್ಕಾರ ಅಂದರೆ ಏನು ಅಂತಾನೆ ಗೊತ್ತಿಲ್ಲ ಎಂದು ಕಿಡಿಕಾರಿದರು.














