ಬೆಂಗಳೂರು: ಉತ್ಸವ ಮೂರ್ತಿಯಾಗಿದ್ದ ಯಡಿಯೂರಪ್ಪನವರು, ವಿಸರ್ಜನಾ ಮೂರ್ತಿಯಾದರೇ? ಎಂದು ಕಾಂಗ್ರೆಸ್ ಬಿಜೆಪಿಯನ್ನು ಪ್ರಶ್ನಿಸಿದೆ.
ಟಿಕೆಟ್ ಯಾರಿಗೆ ನೀಡಬೇಕು ಎಂದು ನಿರ್ಧಾರ ಮಾಡುವುದು ಪಕ್ಷವೇ ಹೊರೆತು ಯಡಿಯೂರಪ್ಪನವರು ಅಲ್ಲ ಎನ್ನುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿಕೆಯ ವರದಿಯ ಪ್ರತಿಯನ್ನು ಲಗತ್ತಿಸಿ ಕಾಂಗ್ರೆಸ್ ಟ್ವೀಟ್ ಮಾಡಿದೆ.
ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಬಿಜೆಪಿ ಕಾಲ ಕಸದಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದೆ.
ಯಡಿಯೂರಪ್ಪನವರ ಸ್ಥಾನ ಮತ್ತು ಮಾನ ಎರಡನ್ನೂ ಕಾಲ ಕೆಳಗಿನ ಕಸದಂತೆ ಕಾಣುತ್ತಿದೆ ಬಿಜೆಪಿ. ಟಿಕೆಟ್ ನಿರ್ಧರಿಸುವ ಹಕ್ಕು, ಸ್ವತಂತ್ರ ಯಡಿಯೂರಪ್ಪ ಅವರಿಗಿಲ್ಲ ಎನ್ನುವ ಮೂಲಕ ಬಿಎಸ್’ವೈ ಮುಕ್ತ ಬಿಜೆಪಿ ಅಭಿಯಾನವನ್ನ ಅಧಿಕೃತಗೊಳಿಸಿದ್ದಾರೆ ಸಿ.ಟಿ ರವಿ. ಲಿಂಗಾಯತರ ಮತಕ್ಕಾಗಿ ಉತ್ಸವ ಮೂರ್ತಿಯಾಗಿದ್ದ ಬಿಎಸ್’ವೈ ಇಷ್ಟು ಬೇಗ ವಿಸರ್ಜನಾ ಮೂರ್ತಿಯಾದರೆ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.