ಮನೆ ಸುದ್ದಿ ಜಾಲ ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ ಆಗಮನ

ಯೋಗ ದಿನಾಚರಣೆ -2022: ಮೈಸೂರಿಗೆ ಪ್ರಧಾನಿ ಮೋದಿ ಆಗಮನ

0

ಮೈಸೂರು(Mysuru): ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ.

ಈ ವಿಚಾರವನ್ನು ಪ್ರಧಾನ ಮಂತ್ರಿ ಸಚಿವಾಲಯ ಖಚಿತ ಪಡಿಸಿದೆ‌.

ಜೂನ್ 21ರಂದು ವಿಶ್ವ ಯೋಗ ದಿನಾಚರಣೆಯಲ್ಲಿ ಭಾಗವಹಿಸಲು ಮೈಸೂರಿಗೆ ಮೋದಿ ಆಗಮಿಸಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ ಖಚಿತಪಡಿಸಿರುವುದನ್ನು ಸಂಸದ ಪ್ರತಾಪ್ ಸಿಂಹ ತಮ್ಮ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಪ್ರಧಾನ ಮಂತ್ರಿ ಕಾರ್ಯಾಲಯವು ಈಗಾಗಲೇ ರಾಜ್ಯ ಸರ್ಕಾರಕ್ಕೆ ಈ ಕುರಿತು ಪತ್ರ ಬರೆದಿದೆ.