ಮೈಸೂರು(Mysuru): ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಸೆ.17 ರಂದು ಯೋಗಥಾನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಈ ಹಿನ್ನೆಲೆಯಲ್ಲಿ ಮೈಸೂರು ನಗರದಲ್ಲಿ 50 ಸಾವಿರ ವಿದ್ಯಾರ್ಥಿಗಳಿಂದ ಸಾಮೂಹಿಕವಾಗಿ ಯೋಗ ಮಾಡಿಸಲು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗಾಗಲೇ 24 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದು, ಉಳಿದ 26 ಸಾವಿರ ವಿದ್ಯಾರ್ಥಿಗಳು ನೊಂದಣಿಯಾಗುವAತೆ ಅಧಿಕಾರಿಗಳು ಗಮನ ಹರಿಸಬೇಕು ಎಂದು ಹೇಳಿದರು.
ಪರೀಕ್ಷೆಗಳೂ ಹತ್ತಿರ ಬರುತ್ತಿರುವುದರಿಂದ ವಿದ್ಯಾರ್ಥಿಗಳ ಮೇಲೆ ಒತ್ತಡ ಹೇರಬೇಡಿ. ಹೀಗಾಗಿ ಉಳಿದ ವಿದ್ಯಾರ್ಥಿಗಳ ಮೇಲೆ ಗಮನ ಹರಿಸಿ. ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.
ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕ ನಟರಾಜ್ ಮಾತನಾಡಿ, ಮೈಸೂರಿಗೂ ಹಾಗೂ ಯೋಗಕ್ಕೂ ಅವಿನಾಭಾವ ಸಂಬAಧವಿದೆ. ವಿಶ್ವ ಯೋಗದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸಿ ಯೋಗ ಮಾಡಿದ್ದಾರೆ ಹಾಗೂ ಯೋಗದ ಮಹತ್ವವನ್ನು ತಿಳಿಸಿದ್ದಾರೆ. ಹೀಗಾಗಿ ಯೋಗ ಕೇವಲ ಒಂದು ವರ್ಗಕ್ಕೆ ಸೀಮಿತವಾಗಬಾರದು ಎಂದರು.
ಯೋಗ ಎಂಬುದು ಕೇವಲ ಒಂದು ದಿನಕ್ಕೆ ಮಾತ್ರ ಸೀಮತವಾಗಬಾರದು. ನಗರದ ರೆಸ್ ಕೋರ್ಸ್ ಆವರಣದಲ್ಲಿ ಯೋಗ ನಡೆಸಲು ತಿರ್ಮಾನಿಸಲಾಗಿದ್ದು, ನಗರದ ಕೇಂದ್ರಭಾಗದಲ್ಲಿರುವ ಶಾಲಾ-ಕಾಲೇಜುಗಳಿಗೆ ತೆರಳಿ ಪ್ರಾಂಶುಪಾಲರಿಗೆ ವಿಷಯದ ಬಗ್ಗೆ ಅರಿವು ಮೂಡಿಸಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಯಾಗುವAತೆ ಗಮನಹರಿಸಿ ಎಂದರು.
ಸಭೆಯಲ್ಲಿ ಯೋಗಫೆಡರೇಷನ್ ಅಧ್ಯಕ್ಷರಾದ ಶ್ರೀಹರಿ, ಉಪಾಧ್ಯಕ್ಷರಾದ ಶಶಿಕುಮಾರ್, ಆಯುಷ್ ಕಾರ್ಯಕ್ರಮದ ರಾಜ್ಯ ಸಂಯೋಜನಾಧಿಕಾರಿ ವಿವೇಕ್, ಎನ್.ಎಸ್.ಎಸ್ ಕಾರ್ಯಕ್ರಮದ ಸಂಯೋಜನಾಧಿಕಾರಿ ಸುರೇಶ್ ಸೇರಿದಂತೆ ಇತರರು ಹಾಜರಿದ್ದರು.