ಮನೆ ಸುದ್ದಿ ಜಾಲ ಯೋಗೇಶ್‌ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ..!

ಯೋಗೇಶ್‌ ಗೌಡ ಹತ್ಯೆ ಪ್ರಕರಣ; ಶಾಸಕ ವಿನಯ್ ಕುಲಕರ್ಣಿ ಸೇರಿ 16 ಮಂದಿಗೆ ಜೀವಾವಧಿ ಶಿಕ್ಷೆ..!

0

ಬಿಜೆಪಿ ಮುಖಂಡ ಯೋಗೇಶ್‌ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೆನ್ನೆ (ಏ.16) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣದ 15ನೇ ಆರೋಪಿ ಆಗಿರುವ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 17 ಜನರನ್ನು ಅಪರಾಧಿಗಳು ಎಂದು ಘೋಷಣೆ ಮಾಡಿದೆ.

ಇದೀಗ ಈ ಸಂಬಂಧ ಶಾಸಕ ವಿನಯ್ ಕುಲಕರ್ಣಿಗೆ ಇಂದು ಶಿಕ್ಷೆಯನ್ನು ಪ್ರಕಟಿಸಿದೆ. ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ನೀಡಿದೆ. ಇನ್ನು 19ನೇ ಆರೋಪಿ ಚನ್ನಕೇಶವ ಟಿಂಗರಿಕರ್​​ಗೆ 7 ವರ್ಷ ಜೈಲು ಶಿಕ್ಷೆ ನೀಡಲಾಗಿದೆ ಹಾಗೂ ಇನ್ನು ಎ 1 ಬಸವರಾಜ ಮುತ್ತಗಿ ಮಾಫಿ ಸಾಕ್ಷಿ ಸ್ಥಾನ ಕೋರ್ಟ್ ಖಚಿತಪಡಿಸಿದೆ. ಇದರ ಜತೆಗೆ ಯೋಗೀಶ್ ಗೌಡರ್ ಮಕ್ಕಳಿಗೆ 16 ಲಕ್ಷ ರೂ ಹಣವನ್ನು ಪರಿಹಾರವಾಗಿ ನೀಡಲು ಸೂಚನೆ ನೀಡಿದೆ.

ಇದೊಂದು ಕರ್ನಾಟಕ ರಾಜಕಾರಣದಲ್ಲಿ ಭಾರೀ ದೊಡ್ಡ ಸಂಚಲವನ್ನು ಮೂಡಿಸಿದೆ. ಇದೀಗ ಅವರ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಕೇಂದ್ರ ಸರ್ಕಾರ ತಂದಿರುವ ಪ್ರಜಾ ಪ್ರತಿನಿಧಿ ಕಾಯ್ದೆಯಡಿಯಲ್ಲಿ ಅವರು ಶಾಸಕ ಸ್ಥಾನದಿಂದ ವಜಾ ಕೂಡ ಮಾಡಲಾಗಿದೆ. ಇನ್ನು ಈ ಪ್ರಕರಣದಲ್ಲಿ 21 ಆರೋಪಿಗಳಿದ್ದರೆ, ಇವರ ಪೈಕಿ ಇಬ್ಬರು ಮಾಫಿಸಾಕ್ಷಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಪೈಕಿ ಕೋರ್ಟ್, 19 ಆರೋಪಿಗಳನ್ನ ದೋಷಿ ಎಂದು ತೀರ್ಪು ನೀಡಿದೆ.

ಎ1 ಬಸವರಾಜ ಮುತ್ತಗಿ ಮಾಫಿಸಾಕ್ಷಿಯಾಗಿ ಹೇಳಿಕೆ ನೀಡಿದ್ದರೆ, ಎ17 ಶಿವಾನಂದ ಮಾಫಿ ಸಾಕ್ಷಿಯಾದ ಬಳಿಕವೂ ಪ್ರತಿಕೂಲ ಹೇಳಿಕೆ ನೀಡಿದ್ದಾರೆ. ಹೀಗಾಗಿ ಮತ್ತೆ ಎ17 ಆರೋಪಿಯನ್ನಾಗಿಸುವಂತೆ ಸಿಬಿಐ ಅರ್ಜಿ ಸಲ್ಲಿಸಿದೆ. ಇನ್ನು ಪ್ರಕರಣದ A 20 ವಾಸುದೇವ ನಿಲೇಕಣಿ, A21 ಸೋಮಶೇಖರ ಅವರನ್ನ ಬಿಡುಗಡೆಗೆ ಕೋರ್ಟ್ ಆದೇಶಿಸಿತ್ತು. ಎ2 ವಿಕ್ರಮ್, ಎ3 ಕೀರ್ತಿ ಕುಮಾರ್, ಎ 4 ಸಂದೀಪ್, ಎ5 ವಿನಾಯಕ್, ಎ6 ಮಹಾಬಲೇಶ್ವರ್ ಅಲಿಯಾಸ್ ಮುದಕ, ಎ 7 ಸಂತೋಷ್, ಎ 8 ದಿನೇಶ್, ಎ 9 ಅಶ್ವಥ್, ಎ10 ಸುನಿಲ್, ಎ 11 ನಜೀರ್ ಅಹಮದ್, ಎ 12 ಷಾನವಾಜ್, ಎ 13 ನೂತನ್ , ಎ14 ಹರ್ಷಿತ್, ಎ15 ವಿನಯ್ ಕುಲಕರ್ಣಿ, ಎ 16 ಚಂದ್ರು ಮಾಮ, ಎ18 ವಿಕಾಸ್ ಕಲಬುರ್ಗಿ, ಎ 19 ಚನ್ನಕೇಶವ ಟಿಂಗರಿಕರ್​​ ಅವರನ್ನು ದೋಷಿಗಳು ಎಂದು ಹೇಳಿ, ಶಿಕ್ಷೆಯನ್ನು ನೀಡಿದೆ.

ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್​ಷೆಯನ್ನು ಘೋಷಣೆ ಮಾಡಿದೆ. ಇದೀಗ ಅವರು 3 ದಿನದಿಂದ ಒಂದೇ ಬಟ್ಟೆಯಲ್ಲಿದ್ದಾರೆ, ಬಟ್ಟೆ ಬದಲಿಸಲು ಅನುಮತಿ ನೀಡುವಂತೆ ಶಾಸಕ ವಿನಯ್ ಕುಲಕರ್ಣಿ ಪರ ವಕೀಲ ಸುನಿಲ್ ಮನವಿ ಮಾಡಿದ್ದಾರೆ. ಅಪರಾಧಿಗಳಿಗೆ ಬಟ್ಟೆ ಒದಗಿಸಲು ಜೈಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜೈಲು ಕೈಪಿಡಿಯಲ್ಲಿರುವಂತೆ ಬಟ್ಟೆ ಒದಗಿಸಲು ಜಡ್ಜ್‌ ಸೂಚನೆ ನೀಡಿದ್ದಾರೆ. ಇದರ ಜತೆಗೆ ಪ್ರತಿ ಸೆಕ್ಷನ್‌ಗೂ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ.