ಮನೆ ರಾಜ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಭವಿಷ್ಯ ನಿರ್ಧಾರ..!

ಯೋಗೇಶ್‌ ಗೌಡ ಕೊಲೆ ಪ್ರಕರಣ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಇಂದು ಭವಿಷ್ಯ ನಿರ್ಧಾರ..!

0

ಬೆಂಗಳೂರು : ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ ಆಗಲಿದೆ. 2016ರಲ್ಲಿ ನಡೆದಿದ್ದ ಜಿಲ್ಲಾ ಪಂಚಾಯತ್‌ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣದ ಆರೋಪಿಯಾಗಿರುವ 21 ಜನರ ಭವಿಷ್ಯವನ್ನು ಇಂದು ಬೆಂಗಳೂರು ಜನಪ್ರತಿನಿಧಿಗಳ ನ್ಯಾಯಾಲಯ ನಿರ್ಧಾರ ಮಾಡಲಿದೆ.

2016ರಲ್ಲಿ ಕೊಲೆ ನಡೆದಾಗ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆದಿತ್ತು. ಅಲ್ಲದೇ ಜೈಲಿನಲ್ಲಿ ಇದ್ದುಕೊಂಡೇ ಯೋಗಿಶ್‌ ಗೌಡ ಜಿಲ್ಲಾ ಪಂಚಾಯತ್‌ ಚುನಾವಣೆ ಗೆದ್ದಿದ್ದರಿಂದ ಹೈಪ್ರ‍್ರೊಫೈಲ್ ಕೇಸ್ ಆಗಿತ್ತು. ಈ ಕೊಲೆಯಲ್ಲಿ ಆಗಿನ ಜಿಲ್ಲಾ ಉಸ್ತುವಾರಿ ಸಚಿವ ಆಗಿದ್ದ ವಿನಯ್‌ ಕುಲಕರ್ಣಿ ಹೆಸರು ಬಂದಿದ್ದರಿಂದ ಮತ್ತಷ್ಟು ಸಂಚಲನ ಮೂಡಿಸಿತ್ತು.

ಈ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಎ-15 ಆಗಿದ್ದಾರೆ. ಅಲ್ಲದೇ ಪೊಲೀಸ್ ಅಧಿಕಾರಿಗಳು ಕೂಡಾ ಇದರಲ್ಲಿ ತಳಕು ಹಾಕಿಕೊಂಡಿದ್ದಾರೆ. ಇನ್ನು ಈ ಕೊಲೆ ನಡೆದಿದ್ದಾದರೂ ಏಕೆ ಎನ್ನುವುದಕ್ಕೆ ಸಿಬಿಐ ಹಲವು ಸಾಕ್ಷಿ ನ್ಯಾಯಾಲಯದ ಮುಂದೆ ಇಟ್ಟಿದೆ.