ಮನೆ ರಾಜಕೀಯ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಪ್ರಮಾಣ ವಚನ ಸ್ವೀಕಾರ

0

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ  ಎರಡನೇ ಬಾರಿಗೆ ಬಿಜೆಪಿಯ ಯೋಗಿ ಆದಿತ್ಯನಾಥ್‌ ಅವರು ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

37 ವರ್ಷಗಳ ಬಳಿಕ ಎರಡನೇ ಅವಧಿಗೆ ಆಯ್ಕೆಯಾಗುತ್ತಿರುವ ಮೊದಲ ಮುಖ್ಯಮಂತ್ರಿ ಇವರಾಗಿದ್ದಾರೆ.

ಯೋಗಿ ಅವರ ಸರ್ಕಾರದಲ್ಲಿ ಎರಡು ಉಪಮುಖ್ಯಮಂತ್ರಿ ಸ್ಥಾನಗಳನ್ನು ಸೃಷ್ಟಿಸಲಾಗಿದೆ. ಕೇಶವ ಪ್ರಸಾದ್‌ ಮೌರ್ಯ ಮತ್ತು ಬ್ರಜೇಶ್‌ ಪಾಟಕ್‌ ಅವರು ಡಿಸಿಎಂಗಳಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಲಖನೌನ ಅಟಲ್‌ ಬಿಹಾರಿ ಇಕಾನಾ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಸೇರಿದಂತೆ ವಿವಿಧ ರಾಜ್ಯಗಳ ಬಿಜೆಪಿ ಸರ್ಕಾರಗಳ ಮುಖ್ಯಮಂತ್ರಿಗಳು, ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು.

ರಾಜ್ಯಪಾಲರಾದ ಆನಂದಿ ಬೆನ್‌ ಪಟೇಲ್‌ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು. ಒಟ್ಟು 52 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಹಿಂದಿನ ಲೇಖನಸುಳ್ಳುಗಳ ಹೊರತಾಗಿ ರಾಜಕೀಯ ನಡೆಯುವುದಿಲ್ಲವೇ..? ಸಿದ್ಧರಾಮಯ್ಯಗೆ ಬಿಜೆಪಿ ಪ್ರಶ್ನೆ
ಮುಂದಿನ ಲೇಖನಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಗೆ ಸಂಬಂಧಿಸಿದ ಮಾಹಿತಿ ಕೇಳಿದರೆ ED ಗೆ RTI ಕಾಯ್ದೆ ಅನ್ವಯಿಸುತ್ತದೆ: ದೆಹಲಿ ಹೈಕೋರ್ಟ್