ಮನೆ ಅಪರಾಧ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ

ಬಾಲಕಿ ಮೇಲೆ ಅತ್ಯಾಚಾರವೆಸಗಿದ ಯುವಕನ ಬಂಧನ

0

ಮಂಗಳೂರು: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಯುವಕನನ್ನು ಸುರತ್ಕಲ್ ಠಾಣಾ ಪೊಲೀಸರು ಬಂಧಿಸಿದ್ದಾರೆ,

ಪರಿಚಿತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದ ನಗರದ ಹೊರವಲಯದ ಇಡ್ಯಾ ನಿವಾಸಿ 19 ನೇ ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯ ಮೇಲೆ ಅತ್ಯಾಚಾರ ಮಾಡಿರುವ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣ ಸಂಬಂಧ ಪೋಕ್ಸೋ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಯುವಕನನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ.