ಮನೆ ರಾಜ್ಯ ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ...

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌..!

0

ಬೆಂಗಳೂರು : ಝಾಂಬಿ ಡ್ರಗ್‌ ಸೇವನೆಗೆ ಸಂಬಂಧಿಸಿದಂತೆ ಬೆಂಗಳೂರು ವ್ಯಕ್ತಿಯ ವಿಡಿಯೋವನ್ನು ವೈರಲ್‌ ಮಾಡುತ್ತಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಎಚ್ಚರಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿರುವ ಯುವಕನನ್ನು ಪರೀಕ್ಷೆ ಮಾಡಿದ್ದೇವೆ. ಆತ ಯಾವುದೇ ಝಾಂಬಿ ಡ್ರಗ್‌ ಸೇವಿಸಿಲ್ಲ. ಈ ವಿಡಿಯೋವನ್ನು ಶೇರ್‌ ಮಾಡಿದ ವ್ಯಕ್ತಿಯನ್ನು ಬಂಧಿಸಿದ್ದೇವೆ ಎಂದು ತಿಳಿಸಿದ್ದಾರೆ.

ಬಾಗಲೂರು ಪೊಲೀಸರು ವಿಡಿಯೋ ಅಪ್ಲೋಡ್ ಮಾಡಿದ್ದ ವ್ಯಕ್ತಿ ಬಂಧಿಸಿದ್ದು ಈಗ ಆತ ಕ್ಷಮೆ ಕೇಳಿ ವಿಡಿಯೋ ಮಾಡಿದ್ದಾನೆ. ಈ ವಿಡಿಯೋವನ್ನ ಯಾರೆಲ್ಲಾ ಶೇರ್ ಮಾಡಿದ್ದಾರೆ ಅವರಿಗೆ ನೋಟಿಸ್ ನೀಡುತ್ತೇವೆ. ಆಧಾರರಹಿತ ಮಾಹಿತಿ ಶೇರ್ ಮಾಡಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಚ್ಚರಿಸಿದ್ದಾರೆ.

ಮೆಡಿಕಲ್ ರಿಪೋರ್ಟ್ ಆಧಾರದ ಮೇಲೆ ಕಾಮೆಂಟ್ ಮಾಡಬೇಕು. ಒಬ್ಬರ ಬಗ್ಗೆ ಅಪಪ್ರಚಾರ ಮಾಡುವ ಕೆಲಸ ಆಗಬಾರದು. ಊಹೆ ಮಾಡಿಕೊಂಡು ಈ ರೀತಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ವಿದೇಶದಲ್ಲಿ ಈ ರೀತಿ ಡ್ರಗ್ ಸೇವನೆ ಇದೆ ಎಂದು ಅವನು ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ಆತನನ್ನು ಈಗ ವಿಚಾರಣೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

ನಟ ದುನಿಯಾ ವಿಜಯ್‌, ನಿವೃತ್ತ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಲವು ಮಂದಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿದ್ದಾರೆ. ನಗರ ಪೊಲೀಸರು ಆರಂಭದಲ್ಲಿ 25 ಮಂದಿಗೆ ನೋಟಿಸ್‌ ನೀಡುವ ಸಾಧ್ಯತೆಯಿದೆ.