Saval TV on YouTube
ರಾಯಚೂರು: ನಗರದ ರಿಮ್ಸ್ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ಮೂಗಿನ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದ ಯುವತಿ ಸಾವನ್ನಪ್ಪಿದ್ದು, ವೈದ್ಯರ ನಿರ್ಲಕ್ಷ್ಯದಿಂದ ಯುವತಿ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿ ಸಂಬಂಧಿಕರು ಶನಿವಾರ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸುತ್ತಿದ್ದಾರೆ.
ರಾಯಚೂರು ತಾಲ್ಲೂಕು ಅಪ್ಪನದೊಡ್ಡಿ ಗ್ರಾಮದ ಯುವತಿ ರಾಜೇಶ್ವರಿ (18) ಮೃತ ಯುವತಿ.
ಮೂಗಿನಲ್ಲಿ ಸೋಂಕು ಸಮಸ್ಯೆಯಿಂದ ಬಳಲುತ್ತಿದ್ದರಿಂದ ಶಸ್ತ್ರಚಿಕಿತ್ಸೆಗೆ ಒಳಪಡಿಸಲಾಗಿತ್ತು.
ಸಾವಿನ ಸಂಬಂಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಮೃತ ಯುವತಿಯ ತಾಯಿಯು ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಶವ ಪಡೆದುಕೊಳ್ಳಲು ನಿರಾಕರಿಸಿರುವ ಸಂಬಂಧಿಗಳು ಆಸ್ಪತ್ರೆ ಎದುರು ಪ್ರತಿಭಟನೆ ಮುಂದುವರಿಸಿದ್ದಾರೆ. ನಿರ್ಲಕ್ಷ್ಯ ವಹಿಸಿರುವ ವೈದ್ಯರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸುತ್ತಿದ್ದಾರೆ.
ಪೊಲೀಸರು ಮನವೊಲಿಸುವ ಪ್ರಯತ್ನ ಮಾಡಿದರೂ ಸಾಧ್ಯವಾಗಿಲ್ಲ.