ಬೆಂಗಳೂರು ಬಾಡಿಗೆ ಮನೆಯಲ್ಲಿ ಯುವತಿ ಸ್ನಾನ ಮಾಡುವಾಗ ಅಪರಿಚಿತ ಯುವಕನೊಬ್ಬ ಕದ್ದು ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ನಗರದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 23 ವರ್ಷದ ಸಾಫ್ಟ್ವೇರ್ ಇಂಜಿನಿಯರ್ ಯುವತಿ ಈ ಬಗ್ಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವುದಾಗಿ ಪೊಲೀಸರು ಮಾಹಿತಿ ತಿಳಿಸಿದ್ದಾರೆ ಎನ್ನಲಾಗಿದೆ ̤
ಯುವತಿ ಕಳೆದ ಒಂಬತ್ತು ತಿಂಗಳ ಹಿಂದೆ ಗರುಡಾಚಾರ್ ಪಾಳ್ಯಕ್ಕೆ ವಾಸ್ತವ್ಯ ಬದಲಾಯಿಸಿದ್ದರು. ಏಪ್ರಿಲ್ 29 (ಬುಧವಾರ) ರಂದು ರಾತ್ರಿ ಸುಮಾರು 9.30ರಿಂದ 9.40ರ ವೇಳೆ ಅವರು ಸ್ನಾನ ಮಾಡುತ್ತಿದ್ದಾಗ, ಪಕ್ಕದ ಕಟ್ಟಡದಿಂದ ಯಾರೋ ಫೋನ್ ಮೂಲಕ ವಿಡಿಯೋ ಮಾಡುತ್ತಿರುವುದನ್ನು ಗಮನಿಸಿ ಬೆಚ್ಚಿಬಿದ್ದಿ ಕಿರುಚಿದ್ದಾರೆ ಎನ್ನಲಾಗಿದೆ. ಈ ವೇಳೆ ಆ ವ್ಯಕ್ತಿ ಮೊಬೈಲ್ ಸಮೇತ ಓಡಿ ಹೋಗಿದ್ದಾನೆ. ಕೂಡಲೇ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಯಿಂದ ತೀವ್ರ ಮಾನಸಿಕ ನೋವಿಗೆ ಒಳಗಾಗಿರುವ ದೂರುದಾರೆ, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುವ ಆತಂಕ ಎದುರಿಸುತ್ತಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಮಹದೇವಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಘಟನಾ ಸ್ಥಳ ಪರಿಶೀಲಿಸಿ, ಆರೋಪಿಯ ಪತ್ತೆಗೆ ಶೋಧ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.

















