ದೊಡ್ಡಬಳ್ಳಾಪುರ: ತಾಲೂಕಿನ ಘಾಟಿ ಕ್ಷೇತ್ರದ ಸುಬ್ರಹ್ಮಣ್ಯ ಸ್ವಾಮಿ ದರ್ಶನಕ್ಕೆ ಬಂದಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ತುರುವೇಕೆರೆ ನಿವಾಸಿ ಮೋನಿಷಾ (24) ಅವರು ಮದುವೆಯಾಗಲೆಂದು ಹರಕೆ ಹೊತ್ತು ತಾಯಿಯೊಂದಿಗೆ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಪೂಜೆ ಸಲ್ಲಿಸಲು ಬಂದಿದ್ದರು. ದೇಗುಲದಲ್ಲಿ ಪೂಜೆ ಸಲ್ಲಿಸುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ಕೂಡಲೇ ಆ್ಯಂಬುಲೆನ್ಸ್ ಮೂಲಕ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೂ ರಕ್ತದೊತ್ತಡ ಕಡಿಮೆಯಾಗಿ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.















