ಮಧ್ಯ ಪ್ರದೇಶ: ಅರೆಬರೆ ಬಟ್ಟೆಗಳನ್ನು ಧರಿಸುವ ಯುವತಿಯರು ರಾಮಾಯಣದಲ್ಲಿ ಬರುವ ರಾಕ್ಷಸಿ ‘ಶೂರ್ಪನಖಿ’ಯಂತೆ ಕಾಣುತ್ತಾರೆ ಎಂದು ಮಹಿಳೆಯರ ಬಟ್ಟೆ ಬಗ್ಗೆ ಬಿಜೆಪಿ ಪಕ್ಷದ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗೀಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಇಂದೋರ್‌ನಲ್ಲಿ ಹನುಮ ಜಯಂತಿ ಪ್ರಯುಕ್ತ ನಡೆದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಸಂದರ್ಭ ಅವರು ಈ ಹೇಳಿಕೆ ನೀಡಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ರಾತ್ರಿ ವೇಳೆ ನಾನು ಹೊರಗೆ ಹೋಗುವಾಗ ಅನೇಕ ಯುವಕ–ಯುವತಿಯರು ಕುಡಿದ ಅಮಲಿನಲ್ಲಿ ತೇಲಾಡುತ್ತಿರುತ್ತಾರೆ. ದೇವರ ಮೇಲೆ ಪ್ರಮಾಣ ಮಾಡಿ ಹೇಳುತ್ತೇನೆ ಅವರನ್ನು ನಿಲ್ಲಿಸಿ ಕೆನ್ನೆಗೆ ಬಾರಿಸಬೇಕೆಂದು ಎನ್ನಿಸುತ್ತದೆ. ಯುವತಿಯರು ಅರೆಬರೆ ಬಟ್ಟೆಗಳನ್ನು ಧರಿಸಿ ರಾಕ್ಷಸಿ ’ಶೂರ್ಪನಖಿ’ ಹಾಗೆ ಕಾಣುತ್ತಾರೆ ಎಂದು ಹೇಳಿದ್ದಾರೆ.
ಹೆಣ್ಣು ಮಕ್ಕಳನ್ನು ನಾವು ದೇವತೆಯೆಂದು ಕಾಣುತ್ತೇವೆ. ನಿಮಗೆ ಒಳ್ಳೆ ದೇಹ ನೀಡಿದ್ದಾನೆ. ಆದ್ದರಿಂದ ಒಳ್ಳೆಯ ಬಟ್ಟೆ ಧರಿಸಿ. ಪೋಷಕರು ಮಕ್ಕಳಿಗೆ ಈ ಬಗ್ಗೆ ತಿಳಿ ಹೇಳಬೇಕು ಎಂದು ಹೇಳಿದ್ದಾರೆ.