ಮನೆ ಅಪರಾಧ ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ: ಮತ್ತೆ ನಾಲ್ವರು ಆರೋಪಿಗಳ ಬಂಧನ

ಯುವಬ್ರಿಗೇಡ್ ಕಾರ್ಯಕರ್ತನ ಹತ್ಯೆ: ಮತ್ತೆ ನಾಲ್ವರು ಆರೋಪಿಗಳ ಬಂಧನ

0

ಮೈಸೂರು:  ತಿ.ನರಸೀಪುರದಲ್ಲಿ ಯುವಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

Join Our Whatsapp Group

ಅನಿಲ್, ಶಂಕರ್, ಮಂಜು ಹ್ಯಾರಿಸ್ ಬಂಧಿತ ಆರೋಪಿಗಳು.

ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಎ1 ಮಣಿಕಂಠ ಅಲಿಯಾಸ್ ಕೊಳೆ ಮಣಿ ಮತ್ತು ಎ2 ಸಂದೇಶ್ ಎಂಬ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ನಾಲ್ವರನ್ನು ಬಂಧಿಸಲಾಗಿದ್ದು ಈ ಮೂಲಕ 6 ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ.

ಶನಿವಾರ ತಿ.ನರಸೀಪುರದಲ್ಲಿ ಹನುಮ ಜಯಂತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ನಂತರ ಭಾನುವಾರವೂ ಸಹ ಗಲಾಟೆ ನಡೆದು ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಮಾಡಲಾಗಿತ್ತು.

ಹಿಂದಿನ ಲೇಖನಹುಣಸೂರು: ಚಿರತೆ ದಾಳಿಗೆ ಕುರಿ ಬಲಿ
ಮುಂದಿನ ಲೇಖನವಿಧಾನಸಭೆಯಲ್ಲಿ ನಮಾಜ್​​ ಗೆ ಅವಕಾಶ ನೀಡಬಾರದು: ಪ್ರಮೋದ್ ಮುತಾಲಿಕ್