ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಮರ್ಡರ್ ಆಗಿದ್ದು ಯುವಕನನ್ನು ಐದಾರು ಜನ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಬನಶಂಕರಿ 2ನೇ ಹಂತದ ಎಕೆ ಕಾಲೋನಿಯಲ್ಲಿ ನಡೆದಿದೆ.
ಕೊಲೆಯಾದ ಯುವಕನನ್ನು ನಿಖಿಲ್ ಎಂದು ತಿಳಿದುಬಂದಿದ್ದು , ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೈಕ್ ನಲ್ಲಿ ಬಂದಿದ್ದ ಐದಾರು ದುಷ್ಕರ್ಮಿಗಳಿಂದ ನಿಖಿಲ್ ನನ್ನು ಹತ್ಯೆ ಮಾಡಲಾಗಿದೆ. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಈ ಒಂದು ಘಟನೆ ನಡೆದಿದೆ.ಕೊಲೆಯಾದ ನಿಖಿಲ್ ಮೃತದೇಹವನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.