ಬಳ್ಳಾರಿ(Bellary): ದುಷ್ಕರ್ಮಿಗಳು ಯುವಕನೊಬ್ಬನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗ್ಗಿನ ಜಾವ ರೇಡಿಯೋ ಪಾರ್ಕ್ ಬಳಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಮಂಜುನಾಥ (35) ಎಂದು ಗುರುತಿಸಲಾಗಿದೆ. ಅಕ್ಕಿ ವ್ಯಾಪಾರಿಯಾದ ಈತ ಬಿಜೆಪಿಗೆ ಸೇರಿದವರು ಎನ್ನಲಾಗಿದೆ.
ರಾತ್ರಿ 2 ಗಂಟೆ ಸುಮಾರಿಗೆ ಆರೊಪಿಯೊಬ್ಬ ಮಂಜುನಾಥನ ಜತೆ ಹೊಡೆದಾಟ ಆರಂಭಿಸಿದ್ದ. ಮತ್ತೊಬ್ಬ ಆರೊಪಿ ಸೇರಿಕೊಂಡು ಈತನನ್ನು ಕೆಳಗೆ ಬೀಳಿಸಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿ ಕಾರಿನಲ್ಲಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿ.ಸಿ.ಟಿ.ವಿ ಕ್ಯಾಮರಾದಲ್ಲಿ ಘಟನೆ ಸೆರೆಯಾಗಿದೆ. ಆರೋಪಿಗಳು ಕೊಲೆಯಾದ ಯುವಕನ ಸ್ನೇಹಿತರು ಇರಬಹುದು. ಕುಡಿದ ಅಮಲಿನಲ್ಲಿ ದ್ವೇಷದಿಂದ ಕೊಲೆ ಮಾಡಿರಬಹುದು ಎಂದು ಪೊಲೀಸರು ಹೇಳಿದ್ದಾರೆ. ಈ ಕುರಿತು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Saval TV on YouTube