ಮನೆ ಸುದ್ದಿ ಜಾಲ ಸೆ.16 ರಿಂದ ಯುವ ಸಂಭ್ರಮ: ಡಾಲಿ ಧನಂಜಯ್ ಉದ್ಘಾಟನೆ

ಸೆ.16 ರಿಂದ ಯುವ ಸಂಭ್ರಮ: ಡಾಲಿ ಧನಂಜಯ್ ಉದ್ಘಾಟನೆ

0

ಮೈಸೂರು(Mysuru): ವಿಶ್ವವಿಖ್ಯಾತ ನಾಡಹಬ್ಬ ದಸರಾದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಯುವ ಸಮುದಾಯದ ಮನಸೂರೆಗೊಳ್ಳುವ ಯುವ ಸಂಭ್ರಮ ಸೆ.16 ರಿಂದ 9 ದಿನಗಳವರೆಗೆ ನಡೆಯಲಿದೆ.

ಬುಧವಾರ ಸುದ್ದಿಗೋಷ್ಟಿಯಲ್ಲಿ ಈ ಕುರಿತು ಮಾಹಿತಿ ನೀಡಿ ಯುವ ದಸರಾ ಉಪ ಸಮಿತಿಯ ವಿಶೇಷಾಧಿಕಾರಿಯಾಗಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್, ಕಾರ್ಯಕ್ರಮವನ್ನು ಖ್ಯಾತ ಕನ್ನಡ ಚಲನಚಿತ್ರ ನಟ ಡಾಲಿ ಧನಂಜಯ್ ಅವರು ಉದ್ಘಾಟನೆ ಮಾಡಲಿದ್ದಾರೆ ಎಂದು ತಿಳಿಸಿದರು.

ಸೆ. 16ರಿಂದ 9 ದಿನಗಳ ಕಾಲ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಯುವ ಸಂಭ್ರಮ ಕಾರ್ಯಕ್ರಮದಲ್ಲಿ 250 ಕಾಲೇಜುಗಳ‌ ವಿದ್ಯಾರ್ಥಿಗಳು ಕಾರ್ಯಕ್ರಮ ನೀಡಲಿದ್ದಾರೆ ಎಂದರು.

75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಸಂಬಂಧಿಸಿದಂತೆ ಹಾಗೂ ಆಜಾದಿ ಕಾ ಅಮೃತ ಮಹೋತ್ಸವ ಸೇರಿದಂತೆ ಒಂಬತ್ತು ವಿಷಯಗಳ ಕುರಿತು ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ಪ್ರಸ್ತುತ ಪಡಿಸಲಿದ್ದಾರೆ.ಇವುಗಳಲ್ಲಿ ಉತ್ತಮ ಪ್ರದರ್ಶನ ತೋರಿದ 18 ತಂಡಗಳನ್ನು ಯುವ ದಸರಾ ಕಾರ್ಯಕ್ರಮಕ್ಕೆ ಆಯ್ಕೆ ಮಾಡಲಾಗುವುದು ಮತ್ತು ಆಯ್ಕೆಯಾಗುವ 18 ತಂಡಗಳಿಗೆ ಮುಂಬರುವ ಯುವ ದಸರಾ ಕಾರ್ಯಕ್ರಮದ ಆರಂಭದಲ್ಲಿ ಆಯ್ಕೆಯಾದ ತಂಡಗಳ ಪ್ರದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಂದಿನ ಲೇಖನಡಾಲಿ ಧನಂಜಯ್ ಅಭಿನಯದ ಮಾನ್ಸೂನ್ ರಾಗ ಚಿತ್ರದ ಟ್ರೈಲರ್ ರಿಲೀಸ್
ಮುಂದಿನ ಲೇಖನಟಿ20 ಸರಣಿ: ಆಸ್ಟ್ರೇಲಿಯಾ ತಂಡದಿಂದ ಹೊರಗುಳಿಯಲಿರುವ ಮಾರ್ಷ್​, ಸ್ಟಾರ್ಕ್​, ಸ್ಟೋಯ್ನಿಸ್​