ಮನೆ ರಾಜ್ಯ 2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’: ತೃತೀಯ ಲಿಂಗಿಗಳಿಗೂ ಅನ್ವಯ

2022-23ನೇ ಸಾಲಿನಲ್ಲಿ ಪದವಿ ಪಡೆದವರಿಗೆ ‘ಯುವನಿಧಿ’: ತೃತೀಯ ಲಿಂಗಿಗಳಿಗೂ ಅನ್ವಯ

0

ಬೆಂಗಳೂರು: 2022-23ರಲ್ಲಿ ಉತ್ತೀರ್ಣರಾಗಿರುವ 18ರಿಂದ 25 ವರ್ಷದೊಳಗಿನ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು. ಮಂಗಳಮುಖಿಯರಿಗೂ ಇದು ಅನ್ವಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

Join Our Whatsapp Group

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶೀಘ್ರದಲ್ಲೇ ಯುವ ನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗುವುದು. 2022-23 ರಲ್ಲಿ ವ್ಯಾಸಂಗ ಮಾಡಿ ಪಾಸ್ ಆಗಿರುವ ಎಲ್ಲಾ ಪದವೀಧರರಿಗೆ 24 ತಿಂಗಳವರೆಗೆ ಪ್ರತಿ ತಿಂಗಳು 3000 ರೂ. ಪದವೀಧರರಿಗೆ, 1500 ಡಿಪ್ಲೋಮಾ ಹೋಲ್ಡರ್ಸ್ ​​ಗಳಿಗೆ ಪಾವತಿ ಮಾಡಲಾಗುವುದು ಎಂದರು.

24 ತಿಂಗಳ ಒಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಅಂತಹ ಪದವೀಧರರಿಗೆ ಅಥವಾ ಡಿಪ್ಲೋಮಾ ಹೋಲ್ಡರ್ಸ್ ​​ಗಳಿಗೆ ಹಣ ಪಾವತಿ ಮಾಡಲಾಗುವುದಿಲ್ಲ. ನಿರುದ್ಯೋಗಿ ಅಂತಾ ಅರ್ಜಿ ಹಾಕಿ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಹಣ ಪಾವತಿ ಮಾಡಲಾಗುತ್ತದೆ. ನೋಂದಣಿ ಮಾಡಿಕೊಂಡ 24 ತಿಂಗಳವರೆಗೆ ಮಾತ್ರ ಭತ್ಯೆ ನೀಡಲಾಗುತ್ತದೆ ಎಂದು ಸಿದ್ದರಾಮಯ್ಯ ಹೇಳಿದರು.

ಯುವ ನಿಧಿ ಅರ್ಜಿ ಸಲ್ಲಿಕೆಗೆ ಅರ್ಜಿ ಕರೆದ 6 ತಿಂಗಳವರೆಗೆ ಅವಕಾಶ ಇರಲಿದೆ. ದುರ್ಬಳಕೆ ತಡೆಯಲು ಕೆಲವು ಷರತ್ತುಗಳನ್ನು ವಿಧಿಸುತ್ತಿದ್ದೇವೆ. 24 ತಿಂಗಳೊಳಗೆ ಖಾಸಗಿ ಅಥವಾ ಸರ್ಕಾರಿ ನೌಕರಿ ಪಡೆದರೆ ಇಲ್ಲ. ಅಂಥವರಿಗೆ ಯುವನಿಧಿ ಯೋಜನೆ ಹಣ ನೀಡುವುದನ್ನು ನಿಲ್ಲಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.