ಮನೆ ಸ್ಥಳೀಯ ಯುವನಿಧಿ ಯೋಜನೆ ನಿರುದ್ಯೋಗಿ ಯುವಕ ಯುವತಿಯರಿಗೆ ದಾರಿದೀಪವಾಗಿದೆ : ಡಾ. ಪುಷ್ಪ ಅಮರನಾಥ್!

ಯುವನಿಧಿ ಯೋಜನೆ ನಿರುದ್ಯೋಗಿ ಯುವಕ ಯುವತಿಯರಿಗೆ ದಾರಿದೀಪವಾಗಿದೆ : ಡಾ. ಪುಷ್ಪ ಅಮರನಾಥ್!

0

ಮೈಸೂರು : ಯುವನಿಧಿ ಯೋಜನೆಯು ನಿರುದ್ಯೋಗಿ ಯುವಕ ಯುವತಿಯರಿಗೆ ದಾರಿದೀಪವಾಗಿದ್ದು ಮುಂದಿನ ಭವಿಷ್ಯ ರೂಪಿಸಿಕೊಳ್ಳಲು ಸಹಕಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಡಾ. ಪುಷ್ಪ ಅಮರನಾಥ್ ಅವರು ಹೇಳಿದರು.

ಇಂದು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ಪಿ. ಜಿ. ಸೆಮಿನಾರ್ ಹಾಲ್ ನಲ್ಲಿ ಆಯೋಜಿಸಿದ್ದ “ಯುವನಿಧಿ” ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಯುವನಿಧಿ ಯೋಜನೆ, ಗೃಹ ಲಕ್ಷ್ಮಿ ಹಾಗೂ ಶಕ್ತಿ ಯೋಜನೆ ದೊಡ್ಡ ಬಲಿಷ್ಠವಾದ ಯೋಜನೆಯಾಗಿದೆ. ಹೆಣ್ಣು ಮಕ್ಕಳ ಜೀವನದಲ್ಲಿ ಕ್ರಾಂತಿಕಾರಿ ಯೋಜನೆ ಜಾರಿಗೆ ತಂದಿದೆ. ಹೆಣ್ಣು ಮಕ್ಕಳು ಯಾವುದಕ್ಕೂ ಸೀಮಿತವಲ್ಲ ಎಲ್ಲಾ ರೀತಿಯ ಶಕ್ತಿ ಹೆಣ್ಣು ಮಕ್ಕಳಿಗೆ ಇರುವಂತೆ ಹೆಣ್ಣು ಮಕ್ಕಳಿಗೆ ಬಲವಿದೆ​ ಎಂಬ ಯೋಜನೆಗಳನ್ನು ಜಾರಿಗೆ ತರಲಾಗಿದೆ.​​

ನಿರುದ್ಯೋಗ ಸಮಸ್ಯೆ ಎಂಬುದು ಒಂದು ದೊಡ್ಡ ಪಿಡುಗಾಗಿದೆ. ಬೇರೆ ಎಲ್ಲಾ ಸಮಸ್ಯೆಗಳನ್ನು ಎದುರಿಸಿ ಜೀವನವನ್ನು ನಡೆಸಬಹುದು. ಆದರೆ ಉದ್ಯೋಗವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಓದಿಗೆ ಸರಿಯಾದ ಹುದ್ದೆ ಸಿಗದೇ ನಿರುದ್ಯೋಗಿಗಳು ಆಗುತ್ತಿದ್ದಾರೆ. ಆದ್ದರಿಂದ ಈ ಯುವನಿಧಿ ಯೋಜನೆ ಅವಕಾಶವನ್ನು ಪಡೆದುಕೊಳ್ಳಲು ಸಹಾಯಕವಾಗಿದೆ. ಆದ್ದರಿಂದ ಪ್ರತಿಯೊಬ್ಬ ಅರ್ಹರು ಹೆಚ್ಚಿನ ಸಂಖ್ಯೆಯ ನೋಂದಣಿ ಮಾಡಿಕೊಳ್ಳುವುದರ ಮೂಲಕ ಪ್ರಯೋಜನವನ್ನು ಪಡೆಯಲು ಒಂದು​ ಉತ್ತಮವಾದ ಜೀವನವನ್ನು ರೂಪಿಸಿಕೊಳ್ಳಿ ಎಂದು ಹೇಳಿದರು.

ಜೊತೆಗೆ ಕರ್ನಾಟಕ ಸರ್ಕಾರದ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಕೊಡಲು ಮುಂದಾಗಿದ್ದು, 40 ರೀತಿಯ ತರಬೇತಿಯನ್ನು ಅದರ ಉಪಯೋಗವನ್ನು ಸಹ ಪ್ರತಿಯೊಬ್ಬ ಮಹಿಳೆಯರು ಪಡೆದುಕೊಳ್ಳಬೇಕು. ನಾನು ಏನೇ ಕಷ್ಟ ಬಂದರೂ ಧೈರ್ಯದಿಂದ ಎದರಿಸುತ್ತೇನೆ ಎಂಬ ಧೈರ್ಯ ನಮ್ಮಲ್ಲಿ ಬರಬೇಕು ಎಂದು ಹೇಳಿದರು .

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಡಿ. ಎಂ. ರಾಣಿ ಅವರು ಮಾತನಾಡಿ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಈ ಯುವನಿಧಿ ಯೋಜನೆಯಿಂದ ಯಾರು ಸಹ ವಂಚಿತರಾಗಬಾರದು. ನೀವು ಈ ಯೋಜನೆ ಬಗ್ಗೆ ತಿಳಿದುಕೊಂಡು ನಿಮ್ಮ ಮೂಲಕ ಬೇರೆಯವರಿಗೂ ಹೆಚ್ಚಿನ ಮಾಹಿತಿ ಪ್ರಚಾರವಾಗಬೇಕು ಎಂಬ ದೃಷ್ಟಿಯಿಂದ ಈ ಕಾರ್ಯಕ್ರಮ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಉಪಯೋಗವಾಗಲಿ ಎಂದು ವಿದ್ಯಾರ್ಥಿಗಳು ಸಹ ತಮ್ಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿ ಎಂಬ ಉದ್ದೇಶದಿಂದ ಕಾಂಗ್ರೆಸ್ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಹೇಳಿದರು. ಪ್ರತಿಯೊಬ್ಬ ಅರ್ಹರು ಸೇವಾ ಸಿಂಧು ಪೋರ್ಟಲ್ ನ ಮೂಲಕ ನೋಂದಣಿ ಮಾಡಿಕೊಳ್ಳುವಂತಹ ಕೆಲಸ ಪ್ರತಿ ನಿತ್ಯವೂ ಆಗುತ್ತಿದೆ, ಇದರ ಉಪಯೋಗವನ್ನು ಅರ್ಹರು ಬಳಸಿಕೊಳ್ಳಬೇಕು ಎಂದು ಹೇಳಿದರು.

ಅರ್ಹರು ಅರ್ಜಿ ಸಲ್ಲಿಸಿದ ನಂತರ ಪ್ರತಿ 3 ತಿಂಗಳಿಗೊಮ್ಮೆ 1 ನೇ ತಾರಿಕಿನಿಂದ 25 ನೇ ತಾರಿಗಿನೊಳಗೆ ಸ್ವಯಂ ಘೋಷಣೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಯುವನಿಧಿ ಹಣ ಬರುವುದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಅರುಣ್ ಕುಮಾರ್ ಅವರು ಮಾತನಾಡಿ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆ​ ಉಪಯೋಗವನ್ನು ಪ್ರತಿಯೊಬ್ಬರು ಪಡೆದುಕೊಳ್ಳಿ ನಿಮಗೆ ಉತ್ತಮವಾದ ಜೀವನ ಸಿಗಲಿ ಎಂದು ಹಾರೈಸಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಶಿವಕುಮಾರ್ ಅವರು ಮಾತನಾಡಿ ಹೆಣ್ಣು ಮಕ್ಕಳು ಮನಸ್ಸು ಮಾಡಿದರೆ ಏನಾದರೂ ಸಹ ಸಾಧಿಸಬಹುದು. ನೀವು ತೆಗೆದುಕೊಳ್ಳುತ್ತಿರುವಂತಹ ದೃಢ ನಿರ್ಧಾರ ನಿಮನ್ನು ಸದೃಢವಾಗಿಸುತ್ತದೆ ಎಂದು ತಿಳಿಸಿದರು.

ನೀವು ದೇಶವನ್ನು ಸರಿಯಾದ ಮಾರ್ಗದಲ್ಲಿ ತೆಗೆದುಕೊಳ್ಳುವಂತೆ ನೀವು ಶಕ್ತಿಯನ್ನು ಹೊಂದಿದ್ದೀರಾ ನೀವು ಮಾಡುವಂತಹ ಕೆಲಸಗಳಲ್ಲಿ​​ ದೃಢತೆ, ನಿಷ್ಠೆಯಿಂದ ಇರಬೇಕು. ಈ ಯುವನಿಧಿ ಯೋಜನೆಯು ಅತ್ಯಂತ ಉತ್ತಮವಾದ ಯೋಜನೆಯಾಗಿದೆ. ಈ ಯೋಜನೆಯ ಉಪಯೋಗವನ್ನು ನೀವು ತಿಳಿದುಕೊಂಡು ಇತರರಿಗೂ ತಿಳಿಸಬೇಕಾಗಿದೆ.​ ಯುವನಿಧಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ನೀವು ನಿಮ್ಮ ತಂದೆ ತಾಯಿಯರಿಗೆ ನಿಮ್ಮ ಗುರುಗಳಿಗೆ ಗೌರವವನ್ನು ತರುವಂತೆ ಬೆಳೆಯುವವರಿಗೂ​​ ಮಾದರಿಯಾಗಬೇಕು ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರದ ಉಪಾಧ್ಯಕ್ಷರಾದ ಹುಣಸೂರು ಬಸವಣ್ಣ ಅವರು ಮಾತನಾಡಿ ಯುವನಿಧಿ ಯೋಜನೆ ನಿರುದ್ಯೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದೆಂದು ಈ ಯೋಜನೆ ಜಾರಿಗೆ​ ತರಲಾಗಿದೆ ಎಂದು ತಿಳಿಸಿದರು.